ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ.'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಆಗಸ್ಟ್ 30ರಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೂಲವಾಗಿ ತುರ್ತು ಆದೇಶ ಹೊರಡಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲಾಗಳಿಗೆ ನಾಳೆ ರಜೆ.
ಭಾರೀ ಮಳೆಯ ಪರಿಣಾಮವಾಗಿ ಜಿಲ್ಲೆಯಲ್ಲಿ ಪ್ರವಾಹ, ನೀರಿನ ಹರಿವು ಹಾಗೂ ಅಡ್ಡಿ-ತೊಡಕು ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ
ಸಾರ್ವಜನಿಕರು ನದಿ, ಹಳ್ಳ, ಅಣೆಕಟ್ಟು ಮತ್ತು ಕಡಲ ತೀರದ ಬಳಿ ಹೋಗದೇ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚಿಸಿದೆ.


0 Comments