ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಸರ್ಕಾರ ದೊಡ್ಡ ಅವಕಾಶ ನೀಡಿದೆ.
ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಅವರು ಹೊರಡಿಸಿದ ಅಧಿಸೂಚನೆಯ ಪ್ರಕಾರ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಶೇ.50ರಷ್ಟು ರಿಯಾಯಿತಿಯಲ್ಲಿ ಬಾಕಿ ದಂಡ ಪಾವತಿಸಬಹುದಾಗಿದೆ.
ಈ ರಿಯಾಯಿತಿ 2023ರ ಫೆಬ್ರವರಿ 11ರವರೆಗೆ ಪೊಲೀಸ್ ಇಲಾಖೆಯ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ.
ವಾಹನ ಮಾಲೀಕರು ಕರ್ನಾಟಕ ಸ್ಟೇಟ್ ಪೊಲೀಸ್ (KSP) ಆಪ್, ಬಿಟಿಪಿ ಅಸ್ಲಂ ಆಪ್, ಹತ್ತಿರದ ಸಂಚಾರ ಪೊಲೀಸ್ ಠಾಣೆ ಅಥವಾ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ದಂಡ ಪಾವತಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

0 Comments