🚨 ಮತ್ತೆ ಮಳೆ ಆರ್ಭಟ – ದಕ್ಷಿಣ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ!🔥

 

Rain

ಮಂಗಳೂರು ಸೇರಿ 7ತಾಲೂಕುಗಳಲ್ಲಿ ಇಂದು (ಆಗಸ್ಟ್ 28) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ!


ಭಾರಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತುರು, ಕಡಬ, ಸುಳ್ಯ,ಮುಲ್ಕಿ, ಮೂಡಬಿದಿರೆ ಮತ್ತು ಉಳ್ಳಾಳ ತಾಲೂಕಿನ ಎಲ್ಲ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಇದೇ ರೀತಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ರೆಡ್‌ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ 6 ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ & ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಆಯಾ ತಹಸೀಲ್ದಾರರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ಸುರಕ್ಷಿತವಾಗಿರಲು ಪೋಷಕರು ಹಾಗೂ ಶಾಲಾ ಆಡಳಿತಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

 ಭಾರಿ ಮಳೆಯ ಪರಿಣಾಮ — ಶಾಲೆ-ಕಾಲೇಜುಗಳಿಗೆ ರಜೆ! 

Post a Comment

0 Comments