📣ಮಂಗಳೂರು – ಸುಬ್ರಹ್ಮಣ್ಯ ರೈಲು ಮಾರ್ಗದ ನಿಲ್ದಾಣಗಳ ಸಮಸ್ಯೆ : ಅಭಿವೃದ್ಧಿಗೆ ಮನವಿ📣

Railway


 

ಮಂಗಳೂರು – ಸುಬ್ರಹ್ಮಣ್ಯ ರೈಲು ಮಾರ್ಗದ ಹಲವಾರು ನಿಲ್ದಾಣಗಳು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಪ್ರಯಾಣಿಕರಿಗೆ ತೀವ್ರ ಅಸೌಕರ್ಯ ಉಂಟಾಗುತ್ತಿದೆ.

ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸೌಲಭ್ಯವಿಲ್ಲದೇ, ಸಿಬ್ಬಂದಿ ಮೇಣದ ಬತ್ತಿ ಮತ್ತು ಡೀಸೆಲ್ ದೀಪದ ಬೆಳಕಿನಲ್ಲಿ ಟಿಕೆಟ್ ನೀಡುವ ಸ್ಥಿತಿ ನಿರ್ಮಾಣವಾಗಿತ್ತು ಆದರೆ ರೈಲ್ವೆ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಇವತ್ತು ಸಂಜೆಯೊಳಗೆ ವೈರಿಂಗ್ ಕೆಲಸಗಳನ್ನು ಪೂರ್ಣಗೊಳಿಸಿ ನಿಲ್ದಾಣಕ್ಕೆ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Railway


ಈ ಮಾರ್ಗದಲ್ಲಿರುವ ಹಲವಾರು ನಿಲ್ದಾಣಗಳಿಗೆ ಸಹ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ನಿರೀಕ್ಷಣಾ ಕೊಠಡಿ ಹಾಗೂ ಸುರಕ್ಷತಾ ಸೌಲಭ್ಯಗಳು ಇನ್ನೂ ಲಭ್ಯವಾಗಿಲ್ಲ.

ಭಾರತೀಯ ರೈಲು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದರೂ, ಗ್ರಾಮೀಣ ರೈಲು ನಿಲ್ದಾಣಗಳ ಅಭಿವೃದ್ಧಿ ಇನ್ನೂ ಹಿಂದುಳಿದಿದೆ. ಮೂಲಭೂತ ಸೌಲಭ್ಯಗಳ ಕೊರತೆಯೇ ಗ್ರಾಮೀಣ ಪ್ರಯಾಣಿಕರಿಗೆ ತೀವ್ರ ಅಸೌಕರ್ಯ ಉಂಟುಮಾಡುತ್ತಿದೆ.

ಮಂಗಳೂರು – ಸುಬ್ರಹ್ಮಣ್ಯ ರೈಲು ಮಾರ್ಗದ ಹಲವಾರು ಸಮಸ್ಯೆಗಳನ್ನು ಬಗೆಹರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಲಾಗುತ್ತಿದೆ.

Post a Comment

0 Comments