🔴ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಕಾರಣ – ನಾಳೆ (ಆಗಸ್ಟ್ 19) ಎಲ್ಲಾ ಶಾಲೆಗಳಿಗೆ ರಜೆ..!📢

 

ಉತ್ತರ ಕನ್ನಡ ಜಿಲ್ಲೆಯಲ್ಲಿಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ.'ರೆಡ್‌ ಅಲರ್ಟ್‌' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಆಗಸ್ಟ್‌ 19ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು,

ಜನಜೀವನ ಅಸ್ತವ್ಯಸ್ತಗೊಂಡಿದೆ.

Rain



ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.ಆದೇಶದ ಅನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, , ಯಲ್ಲಾಪುರ,ಶಿರಸಿ, ದಾಂಡೇಲಿ ಹಾಗೂ ಜೊಯಿಡಾದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ. 
ಭಾರೀ ಮಳೆಯ ಪರಿಣಾಮವಾಗಿ ಜಿಲ್ಲೆಯಲ್ಲಿ ಪ್ರವಾಹ, ನೀರಿನ ಹರಿವು ಹಾಗೂ ಅಡ್ಡಿ-ತೊಡಕು ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ
ಸಾರ್ವಜನಿಕರು ನದಿ, ಹಳ್ಳ, ಅಣೆಕಟ್ಟು ಮತ್ತು ಕಡಲ ತೀರದ ಬಳಿ ಹೋಗದೇ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚಿಸಿದೆ.

Post a Comment

0 Comments