ಶಿರಾಡಿಘಾಟ್ ಗುಂಡ್ಯದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರು–ಧರ್ಮಸ್ಥಳ ಮಾರ್ಗದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಂಗಳೂರು–ಬೆಂಗಳೂರು ಮಾರ್ಗದಲ್ಲಿದ್ದ ರಾಜಹಂಸ ಬಸ್ ನಡುವೆ ಸಂಭವಿಸಿದ ಈ ಅಪಘಾತದಿಂದಾಗಿ ಸುಮಾರು ಮೂರು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.
ಧರ್ಮಸ್ಥಳ ಬಸ್‌ನಲ್ಲಿದ್ದ 9 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸ ಬಸ್‌ನಲ್ಲಿದ್ದ 7 ಮಂದಿಗೆ ಸಣ್ಣ ಗಾಯಗಳಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ನಂತರ ನೆಲ್ಯಾಡಿ ಹೊರಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಸಂಚಾರವನ್ನು ಸುಗಮಗೊಳಿಸಿದರು.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp



0 Comments