ದಸರಾ ಪ್ರಯುಕ್ತ ನಾಳೆಯಿಂದ 18 ದಿನ ಸರ್ಕಾರಿ ಶಾಲೆಗಳಿಗೆ ರಜೆ

 

Leave
ನಾಡಹಬ್ಬ ದಸರಾ ಮಹೋತ್ಸವವನ್ನು ಮಕ್ಕಳು ಸಹ ನೋಡಿ ಕಣ್ತುಂಬಿಕೊಳ್ಳಲಿ ಎಂದು ಶಿಕ್ಷಣ ಇಲಾಖೆ ನಾಳೆಯಿಂದ 18 ದಿನ ಸರ್ಕಾರಿ ಶಾಲೆಗಳಿಗೆ ಹಬ್ಬದ ರಜೆ ಘೋಷಣೆ ಮಾಡಿದೆ.


ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ. ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.


ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 18 ದಿನ ರಜೆ ನೀಡಲಾಗಿದೆ. ಆ ಮೂಲಕ ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ಭರ್ಜರಿ ರಜೆ ನೀಡಲಾಗಿದೆ. ಈ ರಜೆ ಮಕ್ಕಳಲ್ಲಿ ಹಬ್ಬದ ಸಂಭ್ರಮ ದುಪ್ಪಟ್ಟು ಮಾಡಿದೆ.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments