ಬೆಂಗಳೂರು: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ತನ್ನ 75ನೇ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹20 ಲಕ್ಷದವರೆಗೆ ವಿದ್ಯಾರ್ಥಿವೇತನ ನೀಡುವ ಯೋಜನೆ ಪ್ರಕಟಿಸಿದೆ. ಶಾಲಾ ವಿದ್ಯಾರ್ಥಿಗಳಿಂದ ಹಿಡಿದು ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳವರೆಗೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ನವೆಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಯಾರು ಅರ್ಹರು?
ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ (SBI Platinum Jubilee Asha Scholarship) ಹೆಸರಿನ ಈ ಯೋಜನೆ ಅಡಿಯಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ₹3 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವ ಕುಟುಂಬಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ₹6 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವ ಕುಟುಂಬಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕ (ಅಥವಾ 7.0 CGPA) ಪಡೆದಿರುವ ವಿದ್ಯಾರ್ಥಿಗಳು ಮಾತ್ರ ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ವಿಶೇಷ ಮೀಸಲಾತಿ ನೀಡಲಾಗಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಅಂಕಗಳಲ್ಲಿ 10% ರಿಯಾಯಿತಿ ಪಡೆಯುತ್ತಾರೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು sbiashascholarship.co.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಹೋಮ್‌ಪೇಜ್‌ನಲ್ಲಿ ಕಾಣುವ “ಈಗಲೇ ಅನ್ವಯಿಸು” (Apply Now) ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ, ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ವಿಳಾಸದ ಮೂಲಕ ನೋಂದಾಯಿಸಿಕೊಳ್ಳಬೇಕು. ನೋಂದಣಿ ನಂತರ, ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


0 Comments