ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಯಲ್ಲಿದೆ 277 ಹುದ್ದೆ- ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಿ

 

Job
ದಕ್ಷಿಣ ಕನ್ನಡ: ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಜಿಲ್ಲೆಯಲ್ಲಿ ಖಾಲಿ ಇರುವ 277 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್‌ 10 ಕೊನೆಯ ದಿನವಾಗಿದೆ. 

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:

ಅಂಗನವಾಡಿ ವರ್ಕರ್‌ - 56 ಹುದ್ದೆ ಮತ್ತು ಅಂಗನವಾಡಿ ಹೆಲ್ಪರ್‌ - 221 ಹುದ್ದೆಗಳಿವೆ. ಅಂಗನವಾಡಿ ವರ್ಕರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಮತ್ತು ಅಂಗನವಾಡಿ ಹೆಲ್ಪರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸಾಗಿರಬೇಕು. ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್‌ಇಆರ್‌ಟಿಯಿಂದ ಇಸಿಸಿಇ ಡಿಪ್ಲೊಮಾ ಕೋರ್ಸ್‌, ಜೆಒಸಿ ಕೋರ್ಸ್‌, ಎನ್‌ಟಿಟಿ ಕೋರ್ಸ್‌ ಅಥವಾ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್‌, ಹೋಮ್‌ ಸೈನ್ಸ್‌ ಪ್ರಮಾಣ ಪತ್ರ, ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಅಂಗನವಾಡಿ ವರ್ಕರ್‌ ಹುದ್ದೆಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆಯ ವಿಧಾನ:

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ಬೋನಸ್‌ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕ ಮತ್ತು ಮೆರಿಟ್‌ ಪಟ್ಟಿ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ವಿಳಾಸ: karnemakaone.kar.nicಗೆ ಭೇಟಿ ನೀಡಿ.

ಅಂಗನವಾಡಿ ವರ್ಕರ್‌/ಹೆಲ್ಪರ್‌ ಹುದ್ದೆಗಳ ಪೈಕಿ ಒಂದನ್ನು ಆಯ್ಕೆ ಮಾಡಿ. ಅಲ್ಲಿ ಕಂಡುಬರುವ ಅರ್ಜಿಯನ್ನು ಭರ್ತಿ ಮಾಡಿ.

ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾರ್‌/ಉಪ ತಹಶೀಲ್ದಾರ್‌ ಬಳಿಯಿಂದ ಪಡೆದ 3 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp




Post a Comment

0 Comments