ರಾಜ್ಯದಲ್ಲಿ ಸೆಪ್ಟೆಂಬರ್ 29ರವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Rain

 ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್ 29ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Ad


ಉತ್ತರ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳ ಸಮೀಪ ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ವಿವಿಧ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 23ರಿಂದ ಆರಂಭಗೊಂಡು ಸೆಪ್ಟೆಂಬರ್ 29ರವರೆಗೆ ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗ ಮತ್ತು ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಇಲಾಖೆ ಸೂಚಿಸಿದೆ.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


Post a Comment

0 Comments