​ಮಾಜಿ ಸಿಎಂ ಸದಾನಂದ ಗೌಡರ ಬ್ಯಾಂಕ್ ಖಾತೆ ಹ್ಯಾಕ್; 3 ಲಕ್ಷ ರೂ. ಕಳ್ಳತನ

Fraud

​ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿರುವ ಸೈಬರ್ ವಂಚಕರು, ₹3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.

​ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ಆರ್‌ಎಂವಿ ಎಕ್ಸ್ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಬಿಜೆಪಿ ಆಯೋಜಿಸಿದ್ದ 75 ಪೌರ ಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

​ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ, "ನಿನ್ನೆ ನನ್ನ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಪ್ರತಿ ಖಾತೆಯಿಂದಲೂ ತಲಾ ಒಂದು ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಳ್ಳಲಾಗಿದೆ. ಒಟ್ಟು ಸುಮಾರು 3 ಲಕ್ಷ ರೂ. ಹಣ ಕಳ್ಳತನವಾಗಿದೆ" ಎಂದು ಹೇಳಿದರು.

​"ಎಚ್‌ಡಿಎಫ್‌ಸಿ, ಎಸ್‌ಬಿಐ ಮತ್ತು ಆಕ್ಸಿಸ್ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಯುಪಿಐ ಮೂಲಕ ಕಳವು ಮಾಡಲಾಗಿದೆ. ಈ ಸಂಬಂಧ ನಾನು ಸೈಬರ್ ಕ್ರೈಮ್‌ಗೆ ದೂರು ನೀಡುತ್ತೇನೆ" ಎಂದು ಅವರು ತಿಳಿಸಿದರು.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments