ತಮಿಳು ನಟ ವಿಜಯ್ ಕಾರ್ಯಕ್ರಮದಲ್ಲಿ ದುರಂತ – 31 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಗಾಯ

 


ಕರೂರು: ಟಿವಿಕೆ ಪಕ್ಕದ ಅಡ್ಡ ರಸ್ತೆಯ ದಳಪತಿ ವಿಜಯ್ ಅವರ ಕಾರ್ಯಕ್ರಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾರೀ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.



ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಮೊದಲಿಗೆ 10 ಮಂದಿ ಮೃತಪಟ್ಟು ಎಂದು ತಿಳಿಸಲಾಗಿದ್ದರೂ, ನಂತರ ಸಾವಿನ ಸಂಖ್ಯೆ ಹೆಚ್ಚಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಈವರೆಗೂ 31 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ತಿರುಚಿಯಿಂದ 24 ವೈದ್ಯರು ಮತ್ತು 20 ನರ್ಸ್‌ಗಳನ್ನು ತುರ್ತಾಗಿ ಕರೂರಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments