ಕರಾವಳಿ ಭಾಗ:
ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದ ಭಾಗಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಬಹುದು. ಅರಬ್ಬಿ ಸಮುದ್ರದಿಂದ ಬೀಸುತ್ತಿರುವ ಗಾಳಿಯ ವೇಗ ಕಡಿಮೆಯಾದ ಕಾರಣ, ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು, ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಪ್ರಸ್ತುತ, ಸೆಪ್ಟೆಂಬರ್ 19ರಿಂದ ಮಳೆ ಕಡಿಮೆಯಾಗಿ ಮುಂದಿನ 10 ದಿನಗಳವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡು ಭಾಗ:
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಪ್ರಸ್ತುತ, ಸೆಪ್ಟೆಂಬರ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ.
ಒಳನಾಡು ಭಾಗ:
ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments