ಕಡಬ: ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ

Kodimbala

 ಕಸಮುಕ್ತ ಭಾರತ ಅಭಿಯಾನದ ಅಂಗವಾಗಿ ಕಡಬ ಪಟ್ಟಣ ಪಂಚಾಯತ್ ನೇತೃತ್ವದಲ್ಲಿ ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ವಿಶೇಷ ಸ್ವಚ್ಛತಾ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಹಲವಾರು ಸಾರ್ವಜನಿಕರು ಮತ್ತು ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ ನಿಲ್ದಾಣ ಆವರಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರ ಶ್ರಮ ಹಾಗೂ ಬದ್ಧತೆಯನ್ನು ಸಂಘಟಕರು ಶ್ಲಾಘಿಸಿದರು. ಇಂತಹ ಕಾರ್ಯಚಟುವಟಿಕೆಗಳು ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ಸಹಕಾರಿ ಎಂದು ಅಭಿಪ್ರಾಯ ವ್ಯಕ್ತವಾಯಿತು.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments