ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮದ ಅಂಗವಾಗಿ ಇಂದು ನಗರದಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸ್ ಇಲಾಖೆಯವರು ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ನಿಷೇಧಾಜ್ಞೆ ಜಾರಿಗೆ ತಂದಿದ್ದಾರೆ.
ಪೊಲೀಸ್ ಆಯುಕ್ತರು ನೀಡಿದ ಆದೇಶದ ಪ್ರಕಾರ, ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಇಂದು ತಡರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಸಭೆ, ಮೆರವಣಿಗೆ ಹಾಗೂ ಸಮಾರಂಭಗಳಿಗೆ ಅವಕಾಶ ನೀಡಲಾಗುವುದಿಲ್ಲ.
ದಸರಾ ಹಬ್ಬದ ಅಂಗವಾಗಿ ಹಲವು ಆಕರ್ಷಕ ಕಾರ್ಯಕ್ರಮಗಳು ಜನರನ್ನು ಸೆಳೆಯುತ್ತಿವೆ. ಅದರಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ವಿಶೇಷ ಗಮನ ಸೆಳೆಯುತ್ತಿದೆ. ಅಪರೂಪದ ಮತ್ತು ಇತಿಹಾಸ ಪ್ರಸಿದ್ಧ ಕಾರುಗಳನ್ನು ಒಂದೇ ವೇದಿಕೆಯಲ್ಲಿ ವೀಕ್ಷಿಸುವ ಅವಕಾಶ ಜನತೆಗೆ ಸಿಕ್ಕಿದೆ.
ಮತ್ತೊಂದೆಡೆ ಯುವ ದಸರಾ ಕಾರ್ಯಕ್ರಮಕ್ಕೂ ಚಾಲನೆ ದೊರೆತಿದ್ದು, ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರ ಮ್ಯೂಸಿಕ್ ಕಲರವ ಸಂಗೀತಪ್ರಿಯರನ್ನು ರಂಜಿಸಿತು.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


0 Comments