ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ!

Rain

 ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಶುಕ್ರವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಸೆಪ್ಟೆಂಬರ್‌ 27ರವರೆಗೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಇನ್ನು ಮುಂದಿನ 24 ಗಂಟೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 28°C ಇರಲಿದೆ.

Ad

Ad


ಸೆಪ್ಟಂಬರ್‌ 26ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಳ ಹಲವೆಡೆ ಬಿರುಆಳಿಯೊಂದಿಗೆ ಗುರದಿಂದ ಸಾಧಾರಣ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Ad


ದಕ್ಷಿಣ ಒಳನಾಡಿನ ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಬಿಡುಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು (ಗ್ರಾಮಾಂತರ, ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಹವಾಮಾನ ಇಲಾಖೆ ತಿಳಿಸಿದೆ.


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments