ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಪೇದೆ ಮತ್ತು ಪೊಲೀಸ್ ಉಪ ನಿರೀಕ್ಷಕ (ಪಿಎಸ್‌ಐ) ಹುದ್ದೆಗಳ ನೇಮಕಾತಿಯಲ್ಲಿ ಬಹುಕಾಲದಿಂದ ಯುವಕರು ಒತ್ತಾಯಿಸುತ್ತಿದ್ದ ವಯೋಮಿತಿ ಸಡಿಲಿಕೆಗೆ ಒಪ್ಪಿಗೆ ನೀಡಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಈ ಕುರಿತು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದರಿಂದ ಪಿಎಸ್‌ಐ ಹುದ್ದೆಗೆ ಸಾಮಾನ್ಯ ವರ್ಗದ ಗರಿಷ್ಠ ವಯೋಮಿತಿ 28ರಿಂದ 30ಕ್ಕೆ, ಹಿಂದುಳಿದ ವರ್ಗ ಹಾಗೂ ಎಸ್ಸಿ/ಎಸ್ಟಿಗಳಿಗೆ 30ರಿಂದ 32ಕ್ಕೆ ಹೆಚ್ಚಿಸಲಾಗಿದೆ. ಪೇದೆ ಹುದ್ದೆಗೆ ಸಾಮಾನ್ಯ ವರ್ಗದ ಗರಿಷ್ಠ ವಯೋಮಿತಿ 25ರಿಂದ 27ಕ್ಕೆ, ಹಿಂದುಳಿದ ವರ್ಗ ಹಾಗೂ ಎಸ್ಸಿ/ಎಸ್ಟಿಗಳಿಗೆ 27ರಿಂದ 30ಕ್ಕೆ ಹೆಚ್ಚಿಸಲಾಗಿದೆ.
ಈ ನಿರ್ಧಾರದಿಂದ ಕೆಎಸ್‌ಆರ್‌ಪಿ, ನಾಗರಿಕ, ಸಶಸ್ತ್ರ ಮೀಸಲು ಪಡೆ ಸೇರಿ ಎಲ್ಲಾ ವಿಭಾಗಗಳಿಗೆ ಅನ್ವಯವಾಗಲಿದೆ. ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ 26,168 ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp



0 Comments