ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗೃಹರಕ್ಷಕ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ (Home Guards) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವ ಘಟಕಗಳು:
ಮಂಗಳೂರು, ಉಳ್ಳಾಲ,ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡಬಿದ್ರಿ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ
ಅರ್ಹತೆಗಳು:
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. (SSLC) ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ: 19 ರಿಂದ 45 ವರ್ಷದ ಒಳಗಿರಬೇಕು.
ದೈಹಿಕ ಸಾಮರ್ಥ್ಯ: ದೈಹಿಕವಾಗಿ ಸದೃಢರಾಗಿರಬೇಕು.
ಅರ್ಜಿ ಸಲ್ಲಿಸುವವರು ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಗಳನ್ನು ಮೇರಿಹಿಲ್, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು. ಅರ್ಜಿ ಪಡೆಯಲು ಹೋಗುವಾಗ ನಿಮ್ಮ ಆಧಾರ್ ಕಾರ್ಡ್ ಮತ್ತು ಮೂಲ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-10-2025
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2220562 ಕ್ಕೆ ಕರೆ ಮಾಡಬಹುದು.
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಅನಿಲ್ ಕುಮಾರ್ ಎಸ್. ಬೂಮರೆಡ್ಡಿ ಅವರು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments