ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

 

Schlrshp


ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. 

ಮಂಡಳಿಯಲ್ಲಿ ದಿನಾಂಕ: 31/05/2025 ರ ಹಿಂದೆ ನೊಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ದಿನಾಂಕ : 31/10/2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 ಈ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು SSP (State Scholarship Portal) ಮೂಲಕ ಆನ್‌ಲೈನ್‌ನಲ್ಲಿ ನಡೆಯಲಿದೆ. 

https://ssp.karnataka.gov.in/ ಇದು ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಅನ್ನು ಸಂಪರ್ಕಿಸಬಹುದು.

 ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


Post a Comment

0 Comments