ರಾಜ್ಯ ಸರಕಾರ ಕರುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಮೂಲಕ ಕಂಬಳ ಕ್ರೀಡೆಗೆ ಮತ್ತೊಂದು ಹಂತದ ಯಶಸ್ಸು ಸಿಗಲಿದೆ.
ಕಂಬಳ ಕ್ರೀಡೆಗೆ ರಾಜ್ಯ ಸರಕಾರಕ್ಕೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕಂಬಳ ಕ್ರೀಡೆಗೂ ಅನ್ವಯವಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳಕ್ಕೆ ರಾಜ್ಯ ಕ್ರೀಡೆ ಮಾನ್ಯತೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.
ಕಂಬಳಕ್ಕೆ ಒಂದೆಡೆ ರಾಜ್ಯದ ಮಾನ್ಯತೆಯ ಸಿದ್ಧತೆ ಅಂತಿಮ ಹಂತದಲ್ಲಿದ್ದರೆ, ಇನ್ನೊಂದೆಡೆ ಕಂಬಳ ಅಸೋಸಿಯೇಶನ್ ನೇಮಕ ಪಟ್ಟಿಯನ್ನು ರಾಜ್ಯ ಸರಕಾರ ಅಂತಿಮಗೊಳಿಸಿದೆ. ಕಂಬಳ ಸಮಿತಿ ಅಧ್ಯಕ್ಷರೇ ಕಂಬಳ ಅಸೋಸಿಯೇಶನ್‌ಗೆ ಅಧ್ಯಕ್ಷರಾಗಿದ್ದು, ಉಳಿದಂತೆ ಗೌರವ ಸಲಹೆಗಾರರು, ಸದಸ್ಯರು ಸೇರಿದಂತೆ 13 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.
ಕಂಬಳ ಅಸೋಸಿಯೇಶನ್ ಸ್ಥಾಪನೆ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ, ಓಟಗಾರರು, ಕೋಣದ ಮಾಲೀಕರು, ಇತರರಿಗೆ ಸೌಲಭ್ಯ ದೊರೆಯಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವೇ ಕಂಬಳ ಅಸೋಸಿಯೇಶನ್‌ಗೆ ಬೈಲಾ ಸಿದ್ಧಪಡಿಸುತ್ತಿದೆ.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments