ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ; ನಾಲ್ವರು ಶಂಕಿತ ಉಗ್ರರು ವಶಕ್ಕೆ

War

 ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜೊತೆಗೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ.


ಸೆ.20ರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಗಾಯಗೊಂಡ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದಿದೆ.


ಭದ್ರತಾ ಪಡೆ ಹಾಗೂ ಪೊಲೀಸರು ನಿರ್ದಿಷ್ಟ ಮಾಹಿತಿಯ ಮೇರೆಗೆ ದುಡು ಬಸಂತ್‌ಗಢ್‌ದ ಎತ್ತರ ಪ್ರದೇಶಕ್ಕೆ ತಲುಪಿದ್ದಾಗ ಗುಂಡಿನ ಚಕಮಕಿ ನಡೆದಿದೆ. ದಾಳಿ ವೇಳೆ ಯೋಧರೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ ಎಂದು ಸೇನೆ ಮಾಹಿತಿ ನೀಡಿದೆ.


ಜಾಹೀರಾತುಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments