ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ; 12 ಪಾಕ್ ಸೈನಿಕರ ಸಾವು

 

Ad
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿದ್ದು, ಮತ್ತೊಂದು ಯುದ್ಧದ ಕಾರ್ಮೋಡ ಆವರಿಸಿದೆ. ಪಾಕಿಸ್ತಾನವು ಕಾಬೂಲ್ ಮೇಲೆ ವಾಯುದಾಳಿ ನಡೆಸಿದ ಹಿನ್ನೆಲೆಯಲ್ಲಿ, ತಾಲಿಬಾನ್ ಪಡೆಗಳು ಗಡಿಯಲ್ಲಿ ಪ್ರತಿದಾಳಿ ನಡೆಸಿವೆ.

Ad

ಪರಿಣಾಮವಾಗಿ, ಅಫ್ಘಾನ್-ಪಾಕ್ ಗಡಿಯಾದ ಡುರಾಂಡ್ ಲೈನ್ ಬಳಿ ನಡೆದ ಘರ್ಷಣೆಯಲ್ಲಿ 12 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಸೇನೆಯ 12 ಗಡಿ ಹೊರಠಾಣೆಗಳನ್ನು ಅಫ್ಘಾನಿಸ್ತಾನ ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 9 ರಂದು ಪಾಕಿಸ್ತಾನವು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (TTP) ಕಮಾಂಡರ್‌ಗಳನ್ನು ಗುರಿಯಾಗಿಸಿ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ತಾಲಿಬಾನ್ ಈ ದಾಳಿ ನಡೆಸಿದೆ. ಘರ್ಷಣೆ ನಿಲ್ಲಿಸುವಂತೆ ಸೌದಿ ಅರೇಬಿಯಾ ಮತ್ತು ಕತಾರ್ ದೇಶಗಳು ಉಭಯ ರಾಷ್ಟ್ರಗಳಿಗೆ ಮನವಿ ಮಾಡಿವೆ.



ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp


Post a Comment

0 Comments