ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ನಡೆದ 'ಅಶೋಕ ಜನಮನ - 2025' ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಹಲವರು ಆಮ್ಲಜನಕದ ಕೊರತೆಯಿಂದ ಅಸ್ವಸ್ಥರಾಗಿದ್ದಾರೆ.
ಕ್ರೀಡಾಂಗಣದ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಈ ಅವ್ಯವಸ್ಥೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಜನದಟ್ಟಣೆಯಿಂದಾಗಿ ಉಸಿರಾಟದ ತೊಂದರೆ ಮತ್ತು ಆಮ್ಲಜನಕದ ಕೊರತೆ ಉಂಟಾಗಿ ಹಲವರು ಅಸ್ವಸ್ಥರಾದರು.
ನೀರಿನ ಅಭಾವ, ಕೆಸರುಮಯ ಮೈದಾನ:
ಅಲ್ಲದೆ, ನೂಕುನುಗ್ಗಲಿನ ಈ ಸಂದರ್ಭದಲ್ಲಿ ಕುಡಿಯಲು ನೀರು ಸಹ ಸಿಗದೆ ಜನರು ತೀವ್ರ ಪರದಾಡಿದ್ದಾರೆ. ಇತ್ತೀಚೆಗೆ ಸುರಿದ ಮಳೆಯ ಕಾರಣದಿಂದ ಮೈದಾನವು ಕೆಸರುಮಯವಾಗಿ ಮಾರ್ಪಟ್ಟಿತ್ತು. ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದಿದ್ದ ಜನರು ಈ ಕೆಸರು ತುಂಬಿದ ಮೈದಾನದ ಅವ್ಯವಸ್ಥೆಯಿಂದ ತೀವ್ರ ತೊಂದರೆ ಅನುಭವಿಸಿದರು.
ಘಟನೆಯಲ್ಲಿ ಅಸ್ವಸ್ಥಗೊಂಡವರನ್ನು ತಕ್ಷಣ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಕಾರ್ಯಕ್ರಮದ ಸಂಘಟನಾ ಲೋಪದಿಂದಾಗಿ ಈ ಅವ್ಯವಸ್ಥೆ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments