ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಕ್ಟೋಬರ್ 20ರಂದು ನಡೆದ 'ಅಶೋಕ ಜನನ 2025' ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿರುವ ಕೆಲವರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಿದ್ದರು. ಮಧ್ಯಾಹ್ನದ ವೇಳೆ ಉಡುಗೊರೆ ವಿತರಣೆ ಸಂದರ್ಭದಲ್ಲಿ ಉಂಟಾದ ಜನಸಂದಣಿಯ ನೂಕುನುಗ್ಗಲಿನಲ್ಲಿ ಸುಮಾರು ಏಳರಿಂದ ಎಂಟು ಮಂದಿ ಅಸ್ವಸ್ಥಗೊಂಡಿದ್ದರು.
ಅಸ್ವಸ್ಥರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನವರು ಚಿಕಿತ್ಸೆ ಪಡೆದು ತೆರಳಿದ್ದಾರೆ. ಆದರೆ, ಇಬ್ಬರು ಮಹಿಳೆಯರು ರಾತ್ರಿ ವೇಳೆಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು.
ಘಟನೆ ತಿಳಿದು ಸೋಮವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ ಅವರು ಅಸ್ವಸ್ಥಗೊಂಡ ಮಹಿಳೆಯರ ಆರೋಗ್ಯ ವಿಚಾರಿಸಿದರು.
ಜಾಹೀರಾತುಗಾಗಿ ಸಂಪರ್ಕಿಸಿ:
ನಮ್ಮ ಸತ್ಯಪಥ ಸುದ್ದಿ ಪ್ಲಸ್ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ನೀವು ಬಯಸುವಿರಾ?
https://sathyapathanewsplus.blogspot.com
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments