ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲೂ ಮಳೆ ಮುನ್ಸೂಚನೆ!

 

Ad
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟು 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಮಳೆಯ ಆರ್ಭಟವು ಅಕ್ಟೋಬರ್ 15ರವರೆಗೆ ಮುಂದುವರಿಯುವ ಸಾಧ್ಯತೆ ಇದೆ.

Ad

ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ: ಈ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.

 ಉತ್ತರ ಕನ್ನಡ: ಈ ಜಿಲ್ಲೆಯಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸದ್ಯಕ್ಕೆ ಉತ್ತರ ಕನ್ನಡದಲ್ಲಿ ಮಳೆಯು ಈಗಾಗಲೇ ಕಡಿಮೆಯಾಗಿದೆ.

ಕರಾವಳಿಯಲ್ಲಿ ಮಳೆ ವಿರಾಮ ಮತ್ತು ಪುನರಾರಂಭ:

ಕರಾವಳಿಯ ಮಳೆ ಬಗ್ಗೆ ಒಂದು ಮಿಶ್ರ ಮುನ್ಸೂಚನೆ ಇದೆ. ಸದ್ಯದ ಸೂಚನೆಯ ಪ್ರಕಾರ, ಅಕ್ಟೋಬರ್ 13ರಿಂದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.



ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Post a Comment

0 Comments