ರಾಜ್ಯದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ: ಸಚಿವ ಮಧು ಬಂಗಾರಪ್ಪ ಮಾಹಿತಿ

 

Ad
ರಾಜ್ಯದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಒಟ್ಟು 26,000 ಶಿಕ್ಷಕರ ನೇಮಕಾತಿಗೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ದಿನಾಂಕವನ್ನೂ ಪ್ರಕಟಿಸಲಾಗಿದೆ.

ಪ್ರಮುಖ ದಿನಾಂಕಗಳು ಮತ್ತು ನೇಮಕಾತಿ ವಿವರಗಳು:

 * ಅರ್ಜಿ ಸಲ್ಲಿಕೆ ಅವಧಿ: ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

 * ಟಿಇಟಿ ಪರೀಕ್ಷೆ ದಿನಾಂಕ: ಡಿಸೆಂಬರ್ 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಸಚಿವರು ಮಾತನಾಡಿ, ಶೀಘ್ರದಲ್ಲಿಯೇ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಯ ಅಧಿಸೂಚನೆಯನ್ನು ಸಹ ಸರ್ಕಾರ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.

ಹೊಸ ಶಾಲೆಗಳು ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ:

ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳ ಬಗ್ಗೆ ವಿವರಿಸಿದ ಸಚಿವರು, ರಾಜ್ಯದಲ್ಲಿ ಹೊಸದಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲಾಗುವುದು ಎಂದು ತಿಳಿಸಿದರು.

Ad

ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಾಗುತ್ತಿದ್ದು, ಆರನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೂ ಹೆಚ್ಚಿನ ಪ್ರಾಶಸ್ತ್ರ ನೀಡಲಾಗುವುದು. ಜೊತೆಗೆ, ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಲು AI (ಕೃತಕ ಬುದ್ಧಿಮತ್ತೆ) ಆಧಾರಿತ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.


For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp


Post a Comment

0 Comments