ರಾಜ್ಯದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಗುಡ್ ನ್ಯೂಸ್ ನೀಡಿದೆ. ಈ ವರ್ಷದಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ತೇರ್ಗಡೆ ಅಂಕವನ್ನು ಶೇಕಡಾ 35 ರಿಂದ ಶೇಕಡಾ 33 ಕ್ಕೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿ, "ಅಂಕ ಮರು ನಿಗದಿ ಬಗ್ಗೆ ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಿದಾಗ ಶೇ.33 ಅಂಕಗಳ ಪರವಾಗಿ 701 ಹಾಗೂ ವಿರೋಧವಾಗಿ ಕೇವಲ 8 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರ ಆಧಾರದ ಮೇಲೆ ಉತ್ತೀರ್ಣಕ್ಕೆ 35 ಅಂಕಗಳ ಬದಲಾಗಿ 33 ಅಂಕಗಳನ್ನು ನಿಗದಿ ಮಾಡಲಾಗಿದೆ," ಎಂದು ತಿಳಿಸಿದರು.
ಉತ್ತೀರ್ಣ ಅಂಕಗಳ ವಿವರ:
ಈ ಹೊಸ ನಿಯಮದ ಪ್ರಕಾರ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತೇರ್ಗಡೆಗೆ ಸರಾಸರಿ ಶೇಕಡಾ 33ರಷ್ಟು ಅಂಕ ಗಳಿಸಿದರೆ ಸಾಕು.
* ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ: ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ.
* ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ: ಒಟ್ಟು 600 ಅಂಕಗಳಿಗೆ 198 ಅಂಕಗಳನ್ನು ಪಡೆಯಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇ.30 ಅಂಕ ಪಡೆಯುವುದು ಕಡ್ಡಾಯ. ಇನ್ನು, ಆಂತರಿಕ ವಿಷಯದಲ್ಲಿ 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕು.
ಸಿಬಿಎಸ್‌ಇ ಮಾದರಿ ಅನುಸರಣೆ ಮತ್ತು ಅನ್ವಯ:
ಸಿಬಿಎಸ್‌ಇ ಮತ್ತು ನೆರೆ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಉತ್ತೀರ್ಣ ಅಂಕಗಳನ್ನು ಶೇಕಡಾ 33ಕ್ಕೆ ಇಳಿಸಲು ಮೊದಲಿನಿಂದಲೂ ಬೇಡಿಕೆ ಇತ್ತು. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 4ನೇ ವರದಿಯಲ್ಲಿಯೂ ಈ ಬಗ್ಗೆ ಶಿಫಾರಸು ಮಾಡಲಾಗಿತ್ತು.
ಈ ಕನಿಷ್ಠ ಅಂಕಗಳ ನಿಯಮವು ಮುಂಬರುವ ಮಾರ್ಚ್- ಏಪ್ರಿಲ್‌ನಲ್ಲಿ ನಡೆಯಲಿರುವ ಪರೀಕ್ಷೆಗೆ ಅನ್ವಯವಾಗಲಿದೆ. ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈ ಕ್ರಮವು ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣವನ್ನು ಹೆಚ್ಚಿಸುವ ಮತ್ತು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಸಿಬಿಎಸ್‌ಸಿ ಹಾಗೂ ನೆರೆ ರಾಜ್ಯಗಳ ಉತ್ತೀರ್ಣ ಮಾನದಂಡವನ್ನು ಅನುಸರಿಸುವ ದೃಷ್ಟಿಯಿಂದ ಕೈಗೊಳ್ಳಲಾಗಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments