ನಿಡ್ವಾಳ : ಋಷಿ ಪರಂಪರೆಯ ಸನಾತನ ಹಿಂದೂ ಧರ್ಮದ ಉಳಿವಿಗಾಗಿ, ಲೋಕಕಲ್ಯಾಣಾರ್ಥವಾಗಿ ಹಾಗೂ 2026ರ ಏಪ್ರಿಲ್‌ನಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗವು ನವೆಂಬರ್ 05, ಬುಧವಾರದಂದು ಬೆಳಗ್ಗೆ 8:30ರಿಂದ ಜರುಗಲಿದೆ.
ಪರಮಪೂಜ್ಯರ ದಿವ್ಯ ಉಪಸ್ಥಿತಿ
ಈ ಮಹಾಯಾಗವು ಪರಮಪೂಜ್ಯ ಶ್ರೀಶ್ರೀಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಕೋಡಿಮಠ ಮಹಾಸಂಸ್ಥಾನ, ಅರಸೀಕೆರೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ| ಮೂ| ಕೆಮ್ಮಿಂಜೆ ನಾಗೇಶ ತಂತ್ರಿಗಳ ದಿವ್ಯ ನೇತೃತ್ವದಲ್ಲಿ, ಊರ ಹಾಗೂ ಪರವೂರ ಭಗವದ್ಭಕ್ತರ ಸಹಕಾರದೊಂದಿಗೆ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರಧಾನ ಅರ್ಚಕರಿಂದ ಪೌರೋಹಿತ್ಯ
ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ವೇ| ಮೂ| ಅಕ್ಷಯ ಭಟ್ ಬರ್ಲಾಯಬೆಟ್ಟು ಇವರ ಪೌರೋಹಿತ್ಯದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗವು ಜರಗಲಿದೆ ಎಂದು ಮಹಾಯಾಗ ಸಮಿತಿಯವರು ತಿಳಿಸಿದ್ದಾರೆ. ಸಮಸ್ತ ಭಕ್ತಾದಿಗಳು ಈ ಮಹಾಯಾಗದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿ ಕೋರಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments