ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ.
ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ ಹರಿಯಪ್ಪ ಮತ್ತು ರವಿಕಲಾ ಎಂಬವರ ಮನೆಯ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಸಿಡಿಲು ಬಡಿದೆ ಎಂದು ಹೇಳಲಾಗಿದೆ.
ಘಟನೆಯಿಂದ ಮನೆಯಲ್ಲಿದ್ದ ಎಲ್ಲಾ ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟುಹೋಗಿವೆ. ಮನೆಯ ನೆಲ, ಗೋಡೆ ಮತ್ತು ಮೇಲ್ಛಾವಣಿಗೆ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments