ಬೆಂಗಳೂರು: ರಾಜ್ಯದ ಸಾವಿರಾರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಇಲ್ಲಿದೆ ಮಹತ್ವದ ಸುದ್ದಿ. ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ-TET) ನಡೆಸಲು ಶಾಲಾ ಶಿಕ್ಷಣ ಇಲಾಖೆ ದಿನಾಂಕವನ್ನು ನಿಗದಿಪಡಿಸಿದೆ.
ಮಾಧ್ಯಮ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿರುವಂತೆ, ಡಿಸೆಂಬರ್ 7 ರಂದು ಟಿಇಟಿ ಪರೀಕ್ಷೆಯನ್ನು ನಡೆಸಲಾಗುವುದು. ಪರೀಕ್ಷೆಯ ಫಲಿತಾಂಶವನ್ನು ಇದೇ ತಿಂಗಳ ಡಿಸೆಂಬರ್ 31 ರಂದು ಪ್ರಕಟಿಸಲು ಇಲಾಖೆ ನಿರ್ಧರಿಸಿದೆ.
ಅರ್ಜಿ ಸಲ್ಲಿಕೆಗೆ ದಿನಾಂಕ:
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 23 ರಿಂದ ನವೆಂಬರ್ 9 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಈ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಕೆ ಮಾಡುವಂತೆ ಇಲಾಖೆ ಮನವಿ ಮಾಡಿದೆ.
ಶೀಘ್ರದಲ್ಲೇ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ:
ಟಿಇಟಿ ಪರೀಕ್ಷೆಯ ಕುರಿತು ಘೋಷಣೆ ಮಾಡುವ ಜೊತೆಗೆ, ಶಾಲಾ ಶಿಕ್ಷಣ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶ ಹಾಗೂ ಉಳಿದ ಪ್ರದೇಶಗಳ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಶೀಘ್ರದಲ್ಲೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ನೇಮಕಾತಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನಿವಾರಿಸಲು ಇಲಾಖೆ ಸಿದ್ಧತೆ ನಡೆಸಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments