ಸುಬ್ರಹ್ಮಣ್ಯ: ಮದುವೆಗೆ ಬರುತ್ತಿದ್ದ ವ್ಯಾನ್ ಪಲ್ಟಿ: 8ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

 

Ad
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯಬೇಕಿದ್ದ ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ಮದುವೆ ವಾಹನವೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ, ವ್ಯಾನ್‌ನಲ್ಲಿದ್ದ ಹಲವು ಮಂದಿಗೆ ಗಂಭೀರ ಗಾಯಗಳಾದ ಘಟನೆ ಇಂದು ವರದಿಯಾಗಿದೆ.

ಘಟನೆ ಬಿಲ್ಲೆ ತಿರುವು ಎಂಬ ಪ್ರದೇಶದಲ್ಲಿ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಅಪಘಾತಕ್ಕೀಡಾದ ವಾಹನವು ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನ ಮದುವೆಗೆ ವರನ ಕಡೆಯವರನ್ನು ಹೊತ್ತು ತರುತ್ತಿತ್ತು ಎನ್ನಲಾಗಿದೆ. ವಧು-ವರರು ನಿನ್ನೆಯೇ ಮದುವೆ ಹಾಲ್‌ಗೆ ತಲುಪಿದ್ದರು ಎಂದು ತಿಳಿದುಬಂದಿದೆ.

Qd


ವಾಹನ ಪಲ್ಟಿಯಾದ ರಭಸಕ್ಕೆ ವ್ಯಾನ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.

ಗಾಯಾಳುಗಳನ್ನು ಮೊದಲು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ, ಹೆಚ್ಚಿನ ಮತ್ತು ಸೂಕ್ತ ಚಿಕಿತ್ಸೆಗಾಗಿ ತುರ್ತಾಗಿ ಆರು ಅಂಬ್ಯೂಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.


For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp

Post a Comment

0 Comments