ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಈ ನಿರ್ಧಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳಿಂದ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ.
ಸಚಿವರ ಪತ್ರದಲ್ಲಿ ಏನಿದೆ?
ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಕ್ಟೋಬರ್ 4 ರಂದು ಬರೆದಿದ್ದ ಪತ್ರವು ಈಗ ಬೆಳಕಿಗೆ ಬಂದಿದೆ. "ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆ ದೇವಸ್ಥಾನಗಳು, ಪುರಾತತ್ವ ಇಲಾಖೆ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಸಂಘಟನೆಯು 'ಶಾಖೆ', 'ಸಾಂಘಿಕ್' ಅಥವಾ 'ಬೈಠಕ್' ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳನ್ನು ನಿಷೇಧಿಸಬೇಕು," ಎಂದು ಸಚಿವರು ತಮ್ಮ ಪತ್ರದಲ್ಲಿ ಕೋರಿದ್ದಾರೆ.
ಸಚಿವರ ಪತ್ರವನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಚಾರದ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಸರ್ಕಾರದ ಈ ನಡೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.
ಬಿಜೆಪಿ ಮತ್ತು ಹಿಂದೂ ಸಂಘಟನೆಗಳಿಂದ ವಿರೋಧ
ಆರ್‌ಎಸ್‌ಎಸ್ ಚಟುವಟಿಕೆಗಳ ನಿಷೇಧದ ಪ್ರಸ್ತಾಪಕ್ಕೆ ಬಿಜೆಪಿ ಮತ್ತು ವಿವಿಧ ಹಿಂದೂ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದು ಆರ್‌ಎಸ್‌ಎಸ್ ಸಂಘಟನೆಯನ್ನು ಹತ್ತಿಕ್ಕುವ ಮತ್ತು ರಾಜಕೀಯ ದ್ವೇಷ ಸಾಧಿಸುವ ಕ್ರಮ ಎಂದು ಪ್ರತಿಪಕ್ಷಗಳು ಟೀಕಿಸಿವೆ. ಈ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments