ಸುರತ್ಕಲ್: ಯುವಕರಿಗೆ ಚೂರಿ ಇರಿತ ಯತ್ನ ಪ್ರಕರಣ, ಇಬ್ಬರು ಆರೋಪಿಗಳು ಸೇರಿ ಆಶ್ರಯ ನೀಡಿದ ವ್ಯಕ್ತಿ ಬಂಧನ

 

Ad
ಮಂಗಳೂರು (ಸುರತ್ಕಲ್): ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾ ಪ್ರದೇಶದಲ್ಲಿ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಅವರಿಗೆ ಆಶ್ರಯ ನೀಡಿದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

Ad


ಆಗಸ್ಟ್ 23 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಸಮೀಪ ಕ್ಷುಲ್ಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ, ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳಾದ ಕಾನಾ ಸುರತ್ಕಲ್ ನಿವಾಸಿ ಸುಶಾಂತ್ ಕೆ.ವಿ. ಅಲೆಕ್ಸ್ (27) ಮತ್ತು ನಿತಿನ್ (26) ಅವರನ್ನು ಬಂಧಿಸಿದ್ದಾರೆ. ಜೊತೆಯಲ್ಲಿ, ಆರೋಪಿಗಳಿಗೆ ಆಶ್ರಯ ನೀಡಿದ ವ್ಯಕ್ತಿ ಆರುಣ್ ಶೆಟ್ಟಿ (56) ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆದರೆ, ಈ ಕೃತ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿ ಜೊತೆಗೆ ಆಶ್ರಯ ನೀಡಿದ ಅಶೋಕ್ ಎಂಬಾತನು ಇನ್ನೂ ತಲೆಮರೆಸಿಕೊಂಡಿದ್ದು, ಪೊಲೀಸರು ಅವರ ಪತ್ತೆಗಾಗಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ಶ್ರೀ ರವಿಶಂಕರ್ ಅವರ ನಿರ್ದೇಶನದಂತೆ, ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್ ಪಿ ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ರಾಘವೇಂದ್ರ ನಾಯ್ಕ, ಜನಾರ್ಧನ ನಾಯ್ಕ, ಶಶಿಧರ ಶೆಟ್ಟಿ, ಎ.ಎಸ್.ಐ.ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯ, ರಾಮು ಕೆ, ಕಾರ್ತೀಕ್, ವಿನೋದ್, ಜೊತೆಗೆ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿ, ಎಸ್.ಎ.ಎಫ್. ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆ ಹಾಗೂ ತನಿಖಾ ಕಾರ್ಯದಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp



Post a Comment

0 Comments