ಅಕ್ಟೋಬರ್ 29 ರಂದು ಪಾಣೆಮಂಗಳೂರು ಹಳೆ ಸೇತುವೆಯ ಬಳಿ ತನ್ನ ಆಟೋ ರಿಕ್ಷಾವನ್ನು ನಿಲ್ಲಿಸಿ ನಾಪತ್ತೆಯಾಗಿದ್ದ ಮಾರ್ನಬೈಲು ನಿವಾಸಿ ಆಟೋ ಚಾಲಕ ಪ್ರೀತಂ ಲೋಬೋ (Pritam Lobo) ಅವರ ಮೃತದೇಹ ಇಂದು (ಅ. 30) ನೇತ್ರಾವತಿ ನದಿಯ ಡ್ಯಾಂ ಸಮೀಪ ಪತ್ತೆಯಾಗಿದೆ.
ಪ್ರೀತಂ ಲೋಬೋ ಅವರ ಮೃತದೇಹವು ನೇತ್ರಾವತಿ ನದಿಯ ಡ್ಯಾಂ ಸಮೀಪ, ಮರವೊಂದರಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಕಂಡುಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದು ನದಿತೀರಕ್ಕೆ ತಂದಿದ್ದಾರೆ.
ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಹೆಚ್ಚಿನ ವಿಚಾರಣೆ ಮತ್ತು ಸಾವಿಗೆ ನಿಖರ ಕಾರಣ ತಿಳಿಯಲು ಶವಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ.
ಪ್ರೀತಂ ಲೋಬೋ ಅವರು ನಾಪತ್ತೆಯಾದ ಸ್ಥಳದಲ್ಲಿ ಅವರ ಇಲೆಕ್ಟ್ರಿಕ್ ಆಟೋ ರಿಕ್ಷಾ ಪತ್ತೆಯಾಗಿತ್ತು. ಅವರು ನಾಪತ್ತೆಯಾದ ಹಿಂದಿನ ಕಾರಣಗಳು ಮತ್ತು ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments