ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ 'ಸಂಸ್ಕಾರ ಅಧ್ಯಯನ' ಪ್ರಾರಂಭ

 

Ad
ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ, ಶ್ರೀಮುಖ ಪ್ರತಿಷ್ಠಾನ ಪಂಜ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯ ಪಂಜ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಮತ್ತು ವನಿತಾ ಸಮಾಜ ಪಂಜ ಇವರ ಸಂಯುಕ್ತ ಆಶ್ರಯದಲ್ಲಿ 'ಸಂಸ್ಕಾರ ಅಧ್ಯಯನ ಪ್ರಾರಂಭೋತ್ಸವ'ವು ಅಕ್ಟೋಬರ್ 25ರಂದು ಯಶಸ್ವಿಯಾಗಿ ನೆರವೇರಿತು.

Ad

Ad


ಕಾರ್ಯಕ್ರಮವನ್ನು ಕೆ. ಕೃಷ್ಣ ವೈಲಾಯ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶ್ರೀಮುಖ ಪ್ರತಿಷ್ಠಾನದ ಅಧ್ಯಕ್ಷರಾದ ಉದಯ ಶಂಕರ್ ಅಡ್ಕ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪಂಜ ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮಾ ಕುಧ್ವ, ಪಂಜ ಶಾರದಾಂಬ ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ ಮತ್ತು ಶ್ರೀಮುಖ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀಮತಿ ಸುವರ್ಣಿನಿ ಎನ್.ಎಸ್. ಉಪಸ್ಥಿತರಿದ್ದರು.

ಶ್ರೀಮತಿ ಸುವರ್ಣಿನಿ ಎನ್.ಎಸ್. ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.

ಶಿಬಿರದ ಪ್ರಾಚಾರ್ಯರಾದ ಡಾ. ವೆಂಕಟೇಶ ಮಂಜುಳಗಿರಿ ಅವರು ಮಾತನಾಡಿ, ಈ ಸಂಸ್ಕಾರ ಅಧ್ಯಯನ ಶಿಬಿರವನ್ನು ಇನ್ನು ಮುಂದೆ ಪ್ರತಿ ಆದಿತ್ಯವಾರ ಸಂಜೆ 3 ಗಂಟೆಯಿಂದ ನಿಯಮಿತವಾಗಿ ನಡೆಸಲಾಗುವುದು ಎಂದು ತಿಳಿಸಿದರು. ಈ ಸಂಸ್ಕಾರ ಅಧ್ಯಯನ ಕಾರ್ಯಕ್ರಮವು ಯುವ ಪೀಳಿಗೆಗೆ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp



Post a Comment

0 Comments