ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ

 

Ad
ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಅ.29) ಮಳೆ ಅಬ್ಬರಿಸುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Ad


ಇನ್ನು ಅಕ್ಟೋಬರ್ 30ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp

Post a Comment

0 Comments