ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ನಿಲ್ಲಿಸಲು ಹೇಳಿದಾಗ ಆರೋಪಿಯು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯ ಕಾಲಿಗೆ ಗುಂಡು ಬಿದ್ದಿರುವ ಘಟನೆ ಪುತ್ತೂರು ಸಮೀಪ ನಡೆದಿದೆ.
ಘಟನೆಯ ವಿವರ:
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಬ್ದುಲ್ಲಾ (40 ವರ್ಷ) ಎಂಬ ಆರೋಪಿಯು ಐಚರ್ ವಾಹನದಲ್ಲಿ ಸುಮಾರು 10 ಜಾನುವಾರುಗಳನ್ನು ಸಾಗಿಸುತ್ತಿದ್ದನು. ಆತನೇ ಚಾಲಕನಾಗಿದ್ದು, ವಾಹನದಲ್ಲಿ ಇನ್ನೊಬ್ಬ ಆರೋಪಿಯೂ ಇದ್ದನು ಎಂದು ತಿಳಿದುಬಂದಿದೆ.
ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದರೂ ಆತ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಸುಮಾರು 10 ಕಿ.ಮೀ. ದೂರದವರೆಗೆ ವಾಹನವನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಾಗ, ಪಿಎಸ್‌ಐ ರವರು ಎರಡು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ಒಂದು ಗುಂಡು ಐಚರ್ ವಾಹನದ ಮೇಲೆ ಬಿದ್ದಿದ್ದು, ಮತ್ತೊಂದು ಗುಂಡು ಆರೋಪಿ ಅಬ್ದುಲ್ಲಾನ ಕಾಲಿಗೆ ಬಿದ್ದಿದೆ.
ಒಬ್ಬ ಆರೋಪಿ ಪರಾರಿ:
ಘಟನೆಯ ಸಮಯದಲ್ಲಿ ವಾಹನದಲ್ಲಿದ್ದ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಗುಂಡೇಟು ತಿಂದಿರುವ ಆರೋಪಿ ಅಬ್ದುಲ್ಲಾ ಮೂಲತಃ ಕೇರಳದ ಕಾಸರಗೋಡಿನವನು ಎಂದು ತಿಳಿದುಬಂದಿದೆ. ಗಾಯಗೊಂಡ ಅಬ್ದುಲ್ಲಾನನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಟ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಹಿಂದೆಯೂ ಪ್ರಕರಣ ದಾಖಲು:
ಆರೋಪಿ ಅಬ್ದುಲ್ಲಾ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments