ಸರ್ಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂಬ ಸರ್ಕಾರದ ನಿರ್ಧಾರ ಕೇವಲ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕ್ಕೆ ಮಾತ್ರವಲ್ಲ, ರಾಜ್ಯದ ಎಲ್ಲಾ ಖಾಸಗಿ ಸಂಸ್ಥೆಗಳಿಗೂ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟದ ಈ ಮಹತ್ವದ ನಿರ್ಣಯದ ಬಗ್ಗೆ ರಾಜ್ಯದಲ್ಲಿ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ, ಸಿ.ಎಂ. ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣಗಳ ಮೂಲಕವೂ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ವಿವರಿಸಿರುವ ಅವರು, "ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸರ್ಕಾರಿ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ-ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ, ಸ್ಥಳದ ಮಾಲೀಕತ್ವ ಹೊಂದಿರುವ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ," ಎಂದು ತಿಳಿಸಿದ್ದಾರೆ.
ಈ ನಿರ್ಧಾರವು ರಾಜ್ಯದಾದ್ಯಂತ ಇರುವ ಎಲ್ಲಾ ರೀತಿಯ ಖಾಸಗಿ ಸಂಘ-ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ಸಾರ್ವಜನಿಕ ಸ್ಥಳಗಳ ಸಮರ್ಪಕ ಬಳಕೆ ಮತ್ತು ನಿರ್ವಹಣೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments