ಪುತ್ತೂರು ತಾಲೂಕಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯ ಜಿಲ್ಲೆಯ ಪಾಂಡವಪುರದ ದಿವ್ಯಾ (20) ಎಂಬ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿಗಳ ಪ್ರಕಾರ, ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದ ಈ ಇಬ್ಬರೂ ಯುವತಿಯರು ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದರು. ಆದರೆ, ಅಂದಿನಿಂದ ಇವರು ನಾಪತ್ತೆಯಾಗಿದ್ದು, ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ನಾಪತ್ತೆಯಾಗಿರುವ ಮೋನಿಶಾ ಮತ್ತು ದಿವ್ಯಾ ಇಬ್ಬರೂ ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಯುವತಿಯರ ನಾಪತ್ತೆಯ ಕುರಿತು ಕುಟುಂಬ ಸದಸ್ಯರು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಯುವತಿಯರ ಬಗ್ಗೆ ಯಾವುದೇ ಸುಳಿವು ದೊರೆತಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments