2022 ರಲ್ಲಿ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ಕಾನೂನುಬಾಹಿರ ಎಂದು ಘೋಷಿಸಿ ನಿಷೇಧಿಸಿದೆ. ನಿಷೇಧದ ಹೊರತಾಗಿಯೂ ಆರೋಪಿಯು ಸಂಘಟನೆಯ ಪರವಾಗಿ ಪ್ರಚಾರ ಮಾಡಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಪ್ರಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಯನ್ನು ಗುರುವಾರ ಮಂಗಳೂರಿನ ಉರ್ವ ಸ್ಟೋರ್ಸ್ ಬಳಿ ಬಂಧಿಸಿ, ಆತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು 49ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಬೆಂಗಳೂರಿನ ಎನ್‌ಐಎ ಪ್ರಕರಣಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಅಕ್ಟೋಬರ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

0 Comments