ಮಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಪಂಪ್‌ವೆಲ್ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ, ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಹತ್ವದ ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ 15ರ ವರೆಗೆ (ಸುಮಾರು ಏಳು ತಿಂಗಳ ಅವಧಿಗೆ) ಈ ಮಾರ್ಗಗಳಲ್ಲಿ ವಾಹನಗಳ ಸಂಚಾರವನ್ನು ಮರು-ನಿರ್ದೇಶಿಸಿ ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.
ಮಾರ್ಗ ಬದಲಾವಣೆ ವಿವರಗಳು ಹೀಗಿವೆ:
ಏಕಮುಖ ರಸ್ತೆಯ ಘೋಷಣೆ:
ಕರಾವಳಿ ಜಂಕ್ಷನ್‌ನಿಂದ ಪಂಪ್‌ವೆಲ್ ವರೆಗೆ ಇರುವ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್‌ನಿಂದ ಪಂಪ್‌ವೆಲ್ ಕಡೆಗೆ ಸಾಗಲು ತಾತ್ಕಾಲಿಕವಾಗಿ ಏಕಮುಖ ರಸ್ತೆ ಎಂದು ಘೋಷಿಸಲಾಗಿದೆ.
ಪಂಪ್‌ವೆಲ್‌ನಿಂದ ಕಂಕನಾಡಿ ಓಲ್ಡ್ ರಸ್ತೆ - ಕಂಕನಾಡಿ ಜಂಕ್ಷನ್ ರಸ್ತೆಯನ್ನು ಸಹ ತಾತ್ಕಾಲಿಕವಾಗಿ ಏಕಮುಖ ರಸ್ತೆ ಎಂದು ಘೋಷಿಸಲಾಗಿದೆ.
ವಾಹನ ನಿಲುಗಡೆ ನಿಷೇಧ:
ತಾತ್ಕಾಲಿಕವಾಗಿ ಏಕಮುಖ ರಸ್ತೆ ಎಂದು ಘೋಷಿಸಲಾದ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮರು-ನಿರ್ದೇಶಿತ ಸಂಚಾರ ಮಾರ್ಗಗಳು:
ಪಡೀಲ್ ಮತ್ತು ತೊಕ್ಕೊಟ್ಟು ಕಡೆಯಿಂದ ಬರುವ ವಾಹನಗಳು: ಪಂಪ್‌ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗಬೇಕಿರುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆಯ ಮೂಲಕ ಕಂಕನಾಡಿ ಜಂಕ್ಷನ್‌ಗೆ ಬಂದು, ಅಲ್ಲಿ ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು.
ಫನ್ನೀರ್ ಮತ್ತು ವೆಲೆನ್ಸಿಯಾ ರಸ್ತೆಯಿಂದ ಬರುವ ವಾಹನಗಳು: ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್‌ನಿಂದ ನೇರವಾಗಿ ಕರಾವಳಿ ಜಂಕ್ಷನ್‌ಗೆ ಬಂದು, ಅಲ್ಲಿ ಬಲಕ್ಕೆ ತಿರುಗಿ ಪಂಪ್‌ವೆಲ್ ವೃತ್ತದ ಕಡೆಗೆ ಸಂಚರಿಸಬೇಕು.
ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ನಾಗರಿಕರು ಸಹಕರಿಸಬೇಕು ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಸಂಚಾರ ದಟ್ಟಣೆ ಮತ್ತು ಗೊಂದಲವನ್ನು ತಪ್ಪಿಸಲು ವಾಹನ ಸವಾರರು ಬದಲಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ.

.jpg)
0 Comments