ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 3 ರಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಏರ್‌ಪೋರ್ಟ್ ಬಸ್‌ವೊಂದು ಧಗಧಗನೆ ಹೊತ್ತಿ ಉರಿದಿದೆ. ಈ ಬಸ್ ಏರ್ ಇಂಡಿಯಾ ವಿಮಾನದಿಂದ ಕೆಲವೇ ಮೀಟರ್ ದೂರದಲ್ಲಿ ನಿಂತಿತ್ತು.
ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ, SATS ಏರ್‌ಪೋರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಬಸ್, ಬೇ 32ರ ಬಳಿ ನಿಂತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಪೂರ್ತಿಯಾಗಿ ಆವರಿಸಿದೆ. ಈ ಘಟನೆಯು ಆತಂಕಕ್ಕೆ ಕಾರಣವಾಯಿತು, ಏಕೆಂದರೆ ಹೊತ್ತಿ ಉರಿಯುತ್ತಿದ್ದ ಬಸ್ ಏರ್ ಇಂಡಿಯಾ ವಿಮಾನಕ್ಕೆ ತೀರಾ ಹತ್ತಿರದಲ್ಲಿ ನಿಂತಿತ್ತು.
ಬೆಂಕಿಯ ಕೆನ್ನಾಲಿಗೆ ವಿಮಾನಕ್ಕೆ ತಾಗಿದ್ದರೆ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇತ್ತು, ಆದರೆ ಅದೃಷ್ಟವಶಾತ್, ಸ್ವಲ್ಪದರಲ್ಲೇ ಸಂಭಾವ್ಯ ದೊಡ್ಡ ದುರಂತವೊಂದು ತಪ್ಪಿದೆ.
ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಸ್ಸು ಸಂಪೂರ್ಣವಾಗಿ ಬೆಂಕಿಗಾಹುತಿಯಾಗುತ್ತಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸೇರಿ ಬೆಂಕಿಯನ್ನು ಹತೋಟಿಗೆ ತಂದು ಯಶಸ್ವಿಯಾಗಿ ನಂದಿಸಿದ್ದಾರೆ. ಈ ಘಟನೆಯಲ್ಲಿ ಬಸ್ಸಿನ ಹೆಚ್ಚಿನ ಭಾಗ ಸುಟ್ಟು ಹೋಗಿದೆ. ಬಸ್‌ನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಬೆಂಕಿ ಹತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments