ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಅಕ್ಟೋಬರ್ 15 ರಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಈ ಪ್ರತಿಭಟನೆ ನಡೆಯಲಿದೆ.
ನೌಕರರ ಪ್ರಮುಖ ಆಗ್ರಹಗಳು:
* ಶೇ. 25ರಷ್ಟು ವೇತನ ಹೆಚ್ಚಳ ಹಾಗೂ 38 ತಿಂಗಳ ಬಾಕಿ ವೇತನದ ಹಣ ಪಾವತಿ.
* ನಗದು ರಹಿತ ಆರೋಗ್ಯ ಚಿಕಿತ್ಸೆ ಯೋಜನೆಯನ್ನು (Cashless Treatment) ನಾಲ್ಕು ನಿಗಮಗಳಲ್ಲಿ ಏಕಕಾಲದಲ್ಲಿ ಜಾರಿಗೊಳಿಸುವುದು.
* ಎಲೆಕ್ಟ್ರಿಕ್ ಬಸ್‌ಗಳ ನಿರ್ವಹಣೆ ಗುತ್ತಿಗೆಯನ್ನು ಖಾಸಗಿಯವರಿಗೆ ನೀಡುವ ಬದಲು ಸಂಸ್ಥೆಯ ನೌಕರರಿಂದಲೇ ಮಾಡಿಸುವುದು.
ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದ್ದ ಭರವಸೆಗಳು ಈಡೇರದ ಕಾರಣ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ.
ದೀಪಾವಳಿ ಹಬ್ಬದ ಸನ್ನಿಹಿತದಲ್ಲಿ ಈ ಮುಷ್ಕರ ನಡೆಯುತ್ತಿರುವುದರಿಂದ, ಸರ್ಕಾರಿ ಬಸ್‌ಗಳನ್ನು ಅವಲಂಬಿಸಿರುವ ಪ್ರಯಾಣಿಕರು ತೀವ್ರ ತೊಂದರೆಗೆ ಸಿಲುಕಲಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಂಧಾನ ನಡೆಸದಿದ್ದರೆ, ಪ್ರಯಾಣಿಕರು ದುಪ್ಪಟ್ಟು ದರ ನೀಡಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವುದು ಅನಿವಾರ್ಯವಾಗಲಿದೆ.
ಸಾರಿಗೆ ಸಮಸ್ಯೆ ಬಗೆಹರಿಯಲು ಸರ್ಕಾರ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments