ನಗರದ ಹೊರವಲಯದ ಕುಂಪಲದಲ್ಲಿ ರಸ್ತೆ ಸಂಚಾರದ ಅವ್ಯವಸ್ಥೆಗೆ ಮತ್ತೊಂದು ನಿದರ್ಶನ ದೊರೆತಿದ್ದು, ಮಂಗಳೂರಿನಿಂದ ಕುಂಪಲದತ್ತ ಸಾಗುತ್ತಿದ್ದ ಸರ್ಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಉರುಳಿದ ಘಟನೆ ಬುಧವಾರ ನಡೆದಿದೆ. ಪ್ರಯಾಣಿಕರಿಗೆ ಗಂಭೀರ ಗಾಯಗಳಾಗುವ ದೊಡ್ಡ ಅನಾಹುತ ತಪ್ಪಿದೆ.
ಅಪಘಾತಕ್ಕೆ ಮುಖ್ಯ ಕಾರಣವಾಗಿರುವುದು ಕುಂಪಲದ ರಸ್ತೆಯ ಭೀಕರ ದುರವಸ್ಥೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕುಂಪಲದಿಂದ ಬೈಪಾಸ್ ತನಕ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ರಸ್ತೆಯು ಕಳೆದ ಹಲವಾರು ದಶಕಗಳಿಂದ ದುರಸ್ತಿ ಕಂಡಿಲ್ಲ.
ಸ್ಥಳೀಯರ ಪ್ರಕಾರ, ರಸ್ತೆ ದುರಸ್ತಿ ವಿಚಾರದಲ್ಲಿ ಪ್ರತಿ ಚುನಾವಣೆ ಸಮೀಪಿಸಿದಾಗಲೂ ಜನಪ್ರತಿನಿಧಿಗಳಿಂದ ಆಶ್ವಾಸನೆಗಳು ದೊರೆಯುತ್ತವೆ. ಆದರೆ, ಆಶ್ವಾಸನೆಗಳ ಹೊರತಾಗಿ ಈವರೆಗೆ ರಸ್ತೆಯ ದುರಸ್ತಿ ಕಾರ್ಯ ಮಾತ್ರ ಆರಂಭವಾಗಿಲ್ಲ.
ಚಾಲಕನ ನಿಯಂತ್ರಣ ತಪ್ಪಲು ರಸ್ತೆಯ ಕಳಪೆ ಗುಣಮಟ್ಟ ಮತ್ತು ಕಿತ್ತುಹೋದ ಜಲ್ಲಿಕಲ್ಲುಗಳೇ ಕಾರಣ ಎಂದು ಹೇಳಲಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments