ಕಡಬ: ನೂತನ ಕಡಬ ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಾಲೇಶ್ವರ ವಾರ್ಡಿನ ಸದಸ್ಯರಾದ ಹಾಜಿ ಕೆ.ಎಂ. ಹನೀಫ್ ಕಡಬ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅನುಭವಿ ರಾಜಕಾರಣಿಯಾಗಿರುವ ಹನೀಫ್ ಅವರ ಆಯ್ಕೆ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೊಸ ಬಲ ನೀಡುವ ನಿರೀಕ್ಷೆ ಇದೆ.
ಇಂದು ನಡೆದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಕೆ.ಎಂ. ಹನೀಫ್ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಅವರು ಸರ್ವಾನುಮತದಿಂದ ಆಯ್ಕೆಯಾದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಎಲ್ಲಾ ವಾರ್ಡು ಸದಸ್ಯರು ಉಪಸ್ಥಿತರಿದ್ದರು.
ಕೆ.ಎಂ. ಹನೀಫ್ ಅವರು ಇತ್ತೀಚೆಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮಾಲೇಶ್ವರ ವಾರ್ಡ್‌ನಿಂದ ಸ್ಪರ್ಧಿಸಿ ಭರ್ಜರಿ ಜಯಗಳಿಸಿದ್ದರು. ಪಟ್ಟಣ ಪಂಚಾಯತ್ ಆಗುವ ಮೊದಲು ಇಲ್ಲಿ ಗ್ರಾಮ ಪಂಚಾಯತ್ ಆಡಳಿತವಿದ್ದಾಗ, ಅವರು ಸತತ ನಾಲ್ಕು ಬಾರಿ ಸದಸ್ಯರಾಗಿ ಜಯಗಳಿಸಿ, ಪಂಚಾಯತ್ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ಸೇವೆ ಸಲ್ಲಿಸಿದ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಅವರ ಈ ಬಹುದಿನಗಳ ಅನುಭವವು ಸ್ಥಾಯಿ ಸಮಿತಿಯ ಕಾರ್ಯನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ನೂತನವಾಗಿ ಆಯ್ಕೆಯಾದ ಕೆ.ಎಂ. ಹನೀಫ್ ಅವರಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸೇರಿದಂತೆ ಸದಸ್ಯರೆಲ್ಲರೂ ಶುಭಾಶಯ ಕೋರಿದರು.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments