ಹೈಕೋರ್ಟ್ ನಕಲಿ ನೇಮಕಾತಿ ಪತ್ರ ನೀಡಿ ವಂಚನೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

 

Ad
ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಉದ್ಯೋಗಾಕಾಂಕ್ಷಿಗಳಿಗೆ ನಕಲಿ ನೇಮಕಾತಿ ಪತ್ರಗಳನ್ನು ನೀಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದಡಿ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಕೊಪ್ಪಳ ಮೂಲದ ವಿಜಯಾ ಹಿರೇಮಠ ಬಂಧಿತ ಮಹಿಳೆ. ಈ ಪ್ರಕರಣದಲ್ಲಿ ಸುಮಾರು ಏಳು ಮಂದಿ ಉದ್ಯೋಗಾಕಾಂಕ್ಷಿಗಳಿಂದ ಒಟ್ಟು ₹ 48 ಲಕ್ಷ ರೂ.ಗಳನ್ನು ವಂಚಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಈ ವಂಚನೆ ಕೃತ್ಯದ ಬಗ್ಗೆ ಆರ್. ಟಿ. ನಗರ ನಿವಾಸಿ ಅಬ್ದುಲ್ ರಜಾಕ್ ಅವರು 2024ರ ಸೆಪ್ಟೆಂಬರ್ 3 ರಂದು ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಪ್ರಕರಣದ ತನಿಖೆ ವೇಳೆ ಪೊಲೀಸರು ಈ ಹಿಂದೆ ಮೊದಲ ಆರೋಪಿ ಸಿದ್ದಲಿಂಗಯ್ಯ ಹಿರೇಮಠ ಅವರನ್ನು ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ವಿಜಯಾ ಹಿರೇಮಠ ಇದೀಗ ಎರಡನೇ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದಾರೆ.

Ad


ಸಿದ್ದಲಿಂಗಯ್ಯ ಹಿರೇಮಠ ಅವರ ವಂಚನೆ ಕೃತ್ಯಕ್ಕೆ ವಿಜಯಾ ಹಿರೇಮಠ ಸಹಕಾರ ನೀಡುತ್ತಿದ್ದರು ಎನ್ನಲಾಗಿದೆ. ಬಂಧಿತ ವಿಜಯಾ ಹಿರೇಮಠ ಕೊಪ್ಪಳ ನಗರಸಭೆಯ ಮಾಜಿ ಸದಸ್ಯೆ ಎಂದು ತಿಳಿದುಬಂದಿದೆ.

ಕೊಪ್ಪಳದವರಾದ ಸಿದ್ದಲಿಂಗಯ್ಯ ಹಿರೇಮಠ ಬೆಂಗಳೂರಿನ ಸಹಕಾರ ನಗರದಲ್ಲಿ ವಾಸಿಸುತ್ತಿದ್ದರು. ತನಗೆ ಹೈಕೋರ್ಟ್ ನ್ಯಾಯಮೂರ್ತಿಗಳ ನೇರ ಪರಿಚಯವಿದ್ದು, ಅವರ ನೇಮಕಾತಿ ಮೂಲಕ ನ್ಯಾಯಾಲಯದಲ್ಲಿ ಕೆಳಹಂತದ ಹುದ್ದೆಗಳನ್ನು ಕೊಡಿಸುವುದಾಗಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಸಿ ಹಣ ಪಡೆದು ವಂಚನೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಸದ್ಯ ಬಂಧಿತ ಆರೋಪಿಗಳಿಬ್ಬರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.


For Advertisement Contact:


Would you like to promote your business, service, or product on our sathyapatha news plus website?

https://sathyapathanewsplus.blogspot.com

Please contact for advertisements: 9880834166 / WhatsApp




Post a Comment

0 Comments