ಕೊಡಗಿನ ಕುಲದೇವಿ, ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಲಕಾವೇರಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಸಾಂಪ್ರದಾಯಿಕ ಉಡುಪಿನಲ್ಲಿ ಮೂಲನಿವಾಸಿ ಮಹಿಳೆಯರು ಆಗಮಿಸುತ್ತಿದ್ದು, ಹಾಡು ನೃತ್ಯದ ಮೂಲಕ ದಕ್ಷಿಣ ಗಂಗೆ ಕಾವೇರಿಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ.
ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಹಾಗೂ ಭಕ್ತರನ್ನು ಭಾಗಮಂಡಲದಿಂದ ತಲಕಾವೇರಿಗೆ ಕರೆದೊಯ್ಯಲು ಬಸ್ ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp

.jpg)
0 Comments