ಇ-ಸಿಗರೇಟ್ ಅಕ್ರಮ ಮಾರಾಟ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ, ಮೂವರ ಬಂಧನ

 

Ad
ಮಂಗಳೂರು ನಗರದ ಲಾಲ್‌ಬಾಗ್‌ನಲ್ಲಿರುವ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಯಲ್ಲಿ ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬರ್ಕೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು ₹ 9,72,745 ರೂ. ಮೌಲ್ಯದ ಇ-ಸಿಗರೇಟ್ ಮತ್ತು ಇತರ ಬೆಲೆಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad


  ಶಿವು ದೇಶಕೋಡಿ (ಅಂಗಡಿಯ ಮಾಲಕ), ಸಂತೋಷ್ (ಬಂಟ್ವಾಳ ತಾಲೂಕು ನಿವಾಸಿ), ಇಬ್ರಾಹಿಂ ಯಾನೆ ಇರ್ಷಾದ್ (ಕುದ್ರೋಳಿ ನಿವಾಸಿ)ಪೊಲೀಸರು ಬಂಧಿಸಿದ ಆರೋಪಿಗಳೆಂದು ಗುರುತಿಸಲಾಗಿದೆ.

ಲಾಲ್‌ಬಾಗ್‌ನಲ್ಲಿರುವ 'ಆಮಂತ್ರಣ' ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ ಇ-ಸಿಗರೇಟ್‌ಗಳ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ಬರ್ಕೆ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ, ಪೊಲೀಸರು ಇ-ಸಿಗರೇಟ್‌ಗಳ ಜೊತೆಗೆ ಹುಕ್ಕಾ ಸೇವನೆಗೆ ಬಳಸುವ ಸಾಧನಗಳನ್ನೂ ವಶಪಡಿಸಿಕೊಂಡಿದ್ದಾರೆ.

ಈ ಅಕ್ರಮ ಚಟುವಟಿಕೆ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆಯ ಇನ್‌ಸ್ಪೆಕ್ಟರ್ ಮೋಹನ್ ಕೊಟ್ಟಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಬಂಧಿತರ ವಿರುದ್ಧ ಕಾನೂನು ಕ್ರಮ ಜರುಗಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Post a Comment

0 Comments