ಕಡಬ: ಮರ್ದಾಳ ಸಮೀಪದ ಐತ್ತೂರು ಗ್ರಾಮದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಯದಲ್ಲಿ ನಿರತರಾಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ. ಮೃತರನ್ನು ಮರ್ಧಾಳ ಬ್ರಾಂತಿಕಟ್ಟೆಯ ನಿವಾಸಿ, ಖಾಯಂ ರಬ್ಬರ್ ಟ್ಯಾಪರ್ ಆಗಿದ್ದ ಸುರೇಶ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುರೇಶ ಅವರು ಮಧ್ಯಾಹ್ನದ ವೇಳೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ವೈದ್ಯಾಧಿಕಾರಿಗಳು ಪರಿಶೀಲಿಸಿ ಸುರೇಶ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಸುರೇಶ ಅವರು ಕೆಲಸದ ವೇಳೆಯಲ್ಲಿ ಹೃದಯಾಘಾತದಿಂದ ಅಥವಾ ಇನ್ನಾವುದೋ ಆರೋಗ್ಯ ಸಮಸ್ಯೆಯಿಂದ ನಿಧನರಾಗಿರಬಹುದು ಎಂದು ಶಂಕಿಸಲಾಗಿದೆ.
ಮೃತ ಸುರೇಶ ಅವರ ಪತ್ನಿ ದಿವ್ಯ ಅವರು ದೀಪಾವಳಿ ಹಬ್ಬದ ನಿಮಿತ್ತ ಒಂದು ವಾರದ ಹಿಂದೆ ಮಕ್ಕಳೊಂದಿಗೆ ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ತೆರಳಿದ್ದರು. ಪತಿಯ ಅಣ್ಣನ ಮಗ ದೂರವಾಣಿ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಕ್ಷಣ ಸುಳ್ಯದಿಂದ ಹೊರಟು ಕಡಬ ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಮೃತಪಟ್ಟಿರುವ ಸುದ್ದಿ ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಯು ಡಿ ಆರ್ ನಂಬ್ರ 31/2025 ಕಲಂ:194 BNSS-2023 ರಂತೆ ಪ್ರಕರಣ ದಾಖಲಾಗಿದೆ.
For Advertisement Contact:
Would you like to promote your business, service, or product on our sathyapatha news plus website?
https://sathyapathanewsplus.blogspot.com
Please contact for advertisements: 9880834166 / WhatsApp


0 Comments