ಬಂಟ್ವಾಳ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಜಾಲವನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 8.790 ಕಿಲೋ ಗ್ರಾಂ ಗಾಂಜಾ ಹಾಗೂ ಮಾರಾಟಕ್ಕಾಗಿ ಬಳಸುತ್ತಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹2.17 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 10 ರಂದು ಪಿಎಸ್‌ಐ ಸಂದೀಪ್ ಕುಮಾರ್ ಶೆಟ್ಟಿ (ಕಾ&ಸು) ಅವರ ನೇತೃತ್ವದಲ್ಲಿ ಪೊಲೀಸರು ಗೂಡಿನಬಳಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಪಾಣೆಮಂಗಳೂರು ದಿಕ್ಕಿನಿಂದ ಬಿಸಿರೋಡು ಕಡೆಗೆ ಹೆಲ್ಮೆಟ್ ಧರಿಸದೆ ಬರುತ್ತಿದ್ದ ಇಬ್ಬರನ್ನು ತಡೆದಿದ್ದಾರೆ.
ಪೊಲೀಸರ ಸೂಚನೆಗೆ ಮೋಟಾರ್‌ಸೈಕಲ್ ನಿಲ್ಲಿಸದೆ ಓಡಿಹೋಗಲು ಯತ್ನಿಸಿದ ಆರೋಪಿಗಳನ್ನು ಪೊಲೀಸರು ಚಾಕಚಕ್ಯತೆಯಿಂದ ಕೈಕುಂಜೆ ರೈಲ್ವೇ ಸ್ಟೇಷನ್ ಸಮೀಪ ಸುತ್ತುವರಿದು ವಶಕ್ಕೆ ಪಡೆದರು.
ವಿಚಾರಣೆ ವೇಳೆ ಬಂಧಿತರು ಅಬ್ದುಲ್ ಮಜೀದ್ ಹಾಗೂ ಅಬ್ದುಲ್ ಸಾಧಿಕ್ ಎಂದು ಗುರುತಿಸಲ್ಪಟ್ಟಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಜಾಹೀರಾತಿಗಾಗಿ ಸಂಪರ್ಕಿಸಿ:
ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

.jpg)
0 Comments